*ಸಿಎಂ ಸಿದ್ದರಾಮಯ್ಯ ಅವರ ಜನ ಸ್ಪಂದನೆಗೆ ಕ್ಷಣಗಣನೆ; ಬೆಳಗ್ಗೆಯಿಂದಲೇ ಅಹವಾಲು ಹಿಡಿದು ನೆರೆದಿರುವ ಜನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಮೊದಲ ಪೂರ್ಣಾವಧಿ ಜನತಾ ದರ್ಶನಕ್ಕೆ ಕ್ಷಣಗಣೆ ಆರಂಭವಾಗಿದ್ದು, ಬೆಳಿಗ್ಗೆಯಿಂದಲೇ ಸಾರ್ವಜನಿಕರು ಅಹವಾಲುಗಳನ್ನು ಹಿಡಿದು ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಆಗಮಿಸುತ್ತಿದ್ದಾರೆ.
ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ.
ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ.
ಅಹವಾಲುಗಳನ್ನು ಹಿಡಿದು ಬಂದಿರುವ ಜನರಿಗೆ ಅಧಿಕಾರಿಗಳು ವ್ಯವಸ್ಥೆ ಮಾಡುತ್ತಿದ್ದು, ಇಡಿ ವ್ಯವಸ್ಥೆಯನ್ನು ಆಡಳಿತ ವಿಭಾಗದ ಉಪ ಕಾರ್ದರ್ಶಿ ಅರುಣ್ ಫುರ್ಟಾಡೊ ಮತ್ತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೋನರೆಡ್ಡಿ ಪರಿಶೀಲನೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ