Kannada NewsKarnataka NewsLatest

*ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ-ಅಹವಾಲುಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಮಟದ ಎರಡನೇ ಜನಸ್ಪಂದನ ಕಾರ್ಯಕ್ರಮದ ಬಳಿಕ ಸಿಎಂ ಸಿದ್ದರಾಮಯ್ಯ ಹಲವು ಖಡಕ್ ಸೂಚನೆಗಳನ್ನು ಅಧಿಕಾರಿಗಳಿಗೆ ಸೂಚಿಸಿದರು.

ಎರಡನೇ ಜನಸ್ಪಂದನದ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮ ಗೋಷ್ಠಿಯಲ್ಲಿ ನೀಡಿದ ಖಡಕ್ ಸೂಚನೆಗಳು:

ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ

Home add -Advt

ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ

ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ

ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ

ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಸಿಎಂ ಸೂಚಿಸಿದರು

ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ

ಒಂದು ತಿಂಗಳೊಳಗೆ ಹೆಚ್ಚು ಅರ್ಜಿ , ಅಹವಾಲು ಪರಿಗರಿಸಿ ಎಂದು DC, CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ ಸಿಎಂ

ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button