ಪ್ರಗತಿವಾಹಿನಿ ಸುದ್ದಿ: ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.
ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ 90 ಕೋಟಿ ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು. Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ