*ಚಿತ್ರರಂಗಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ: ಮಲ್ಟಿಫ್ಲೆಕ್ಸ್ ಗಳಲ್ಲೂ 200 ರೂಪಾಯಿಗೆ ಟಿಕೆಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ಸಿನಿಮಾ ರಂಗಕ್ಕೂ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ವಿಶೇಷವಾಗಿ ಸಿನಿ ಪ್ರೇಕ್ಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಮಲ್ಟಿ ಫ್ಲೆಕ್ಸ್ ಗಳಲ್ಲಿಯೂ ಏಕರೂಪ ಟಿಕೆಟ್ ದರ ಜಾರಿಗೆ ಬರಲಿದೆ. ಇನ್ಮುಂದೆ ಎಲ್ಲಾ ವಿಧಧ ಚಿತ್ರಮಂದಿರಗಳಲ್ಲಿಯೂ 200 ರೂಪಾಯಿ ಟಿಕೆಟ್ ದರ ನಿಗದಿಗೆ ನಿರ್ಧರಿಸಲಾಗಿದೆ.
· ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.
· ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ ನಿವೇಶನದಲ್ಲಿ ಪಿಪಿಪಿ ಮಾದರಿಯಲ್ಲಿ ಚಿತ್ರಮಂದಿರ ಸಮುಚ್ಛಯ ಅಭಿವೃದ್ಧಿ.
· ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್ ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ಚಲನಚಿತ್ರ ಭಂಡಾರ ಸ್ಥಾಪನೆ.
· ಪತ್ರಕರ್ತರ ಮಾಸಾಶನ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ.
· ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆ ಸೃಜಿಸಲು ಕ್ರಮ.
· ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ “ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ” ಯೋಜನೆ ಅನುಷ್ಠಾನ.
· ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ.
· ಎಲ್ಲಾ ವಿಧದ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ಮಿತಿಗೊಳಿಸಲು ಕ್ರಮ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ