Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ಇಂದು ರಾಜ್ಯ ವಿಧಾನಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆ ಮಾಡಲಿದ್ದಾರೆ.

ಬೆಳಿಗ್ಗೆ 10:15ಕ್ಕೆ ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮೇಲೆ ಎಲ್ಲಾ ಕ್ಷೇತ್ರಗಳ ಜನತೆಯ ನಿರೀಕ್ಷೆ ಹೆಚ್ಚಿದೆ.

ಈಗಾಗಲೇ ಮುಖ್ಯಮಂತ್ರಿಯವರ ಕಾವೇರಿ ನಿವಾಸದಲ್ಲಿ ಹಣಕಾಸು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು. ಈ ಬಾರಿ ಸೂಟ್ ಕೇಸ್ ಬದಲಾಗಿ ಬ್ಯಾಗ್ ನಲ್ಲಿ ಬಜೆಟ್ ಪ್ರತಿ ಇದ್ದು, ಸಿಎಂ ಬಜೆಟ್ ಪ್ರತಿಯ ಬ್ಯಾಗನ್ನು ಪ್ರದರ್ಶಿಸಿದರು.

ವಿಧಾನಸೌಧಕ್ಕೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಚಿವ ಸಂಪುಟದ ಅನುಮೋದನೆ ಪಡೆಯಲಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತಿರುವ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಸಿಎಂ ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.

Home add -Advt


Related Articles

Back to top button