
ಹೂಮಳೆಗರೆದು ಸಿಎಂ ಸಿದ್ದರಾಮಯ್ಯರನ್ನು ಸ್ವಾಗತಿಸಿದ ಕೊಡಗು ಜನತೆ

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗು ಜಿಲ್ಲಾ ಪ್ರವಾಸದಲ್ಲಿದ್ದು, ಕೊಡಗು ಜನತೆಯ ಪ್ರೀತಿ-ವಿಶ್ವಾಸಕ್ಕೆ ಮನಸೋತಿದ್ದಾರೆ. ಅಂದು ವಿಪಕ್ಷನಾಯಕನಾಗಿ ಭೇಟಿ ಕೊಟ್ಟಾಗ ಕಿಡಿಗೇಡಿಗಳು ತನ್ನ ಮೇಲೆ ಮೊಟ್ಟೆ ತೂರಾಟ ನಡೆಸಿದ್ದನ್ನು ಸ್ಮರಿಸಿರುವ ಸಿಎಂ ಸಿದ್ದರಾಮಯ್ಯ, ಇಂದು ಅದೇ ಕೊಡಗಿನಲ್ಲಿ ತನ್ನ ಮೇಲೆ ಹೂಮಳೆ ಸುರಿಸಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ ಸಮಸ್ತ ಸಜ್ಜನ ಜನಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ.
ಇದು ಕೊಡಗಿನ ಸಜ್ಜನರ ಗೆಲುವು, ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ