ಪಕ್ಷ ದ್ರೋಹಿಗಳಿಗೆ ಹೀಗೇ ಶಿಕ್ಷೆಯಾಗಬೇಕು ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ಇಲ್ಲ ಎಂಬ ಸಿಎಂ ಬಿ ಎಎಸ್​ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಪಕ್ಷ ದ್ರೋಹಿಗಳಿಗೆ ಸರಿಯಾದ ಪಾಠ ಆಗಿದೆ. ನಂಬಿಕೆ ದ್ರೋಹ ಮಾಡಿದವರಿಗೆ ಇದೇ ರೀತಿ ಶಿಕ್ಷೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

71ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎಲ್ಲವನ್ನೂ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ದ್ರೋಹ ಬಗೆದಿದ್ದ ಅನರ್ಹ ಶಾಸಕರಿಗೆ ಈಗ ತಕ್ಕ ಪಾಠವಾಗಿದೆ. ಸೋತವರು ಸಚಿವ ಸ್ಥಾನಕ್ಕಾಗಿ ದುಂಬಾಲು ಬಿದ್ದಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಸೋತವರಿಗೆ ಸಚಿವ ಸ್ಥಾನ ನೀಡುವ ಪ್ರೆಶ್ನೆಯೇ ಈಗ ಉದ್ಭವಿಸಲ್ಲ ಎಂದು ಹೇಳಿದ್ದಾರೆ. ಪಕ್ಷ ದ್ರೋಹಿಗಳಿಗೆ ಹೀಗೆಯೇ ಶಿಕ್ಷೆಯಾಗಬೇಕು ಎಂದು ಗುಡುಗಿದರು.

ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ನೇಮಕವಾಗಲಿದೆ. ವಿಪಕ್ಷ ನಾಯಕ ಸ್ಥಾನದ ಸಮಾಸ್ಯೆಯನ್ನೂ ಹೈಕಮಾಂಡ್ ಶೀಘ್ರ ಬಗೆಹರಿಸಲಿದೆ ಎಂದು ಮಾಜಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Home add -Advt

Related Articles

Back to top button