Politics

*ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ನಡೆಸಿದರು.

ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

Home add -Advt

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದ ಮುಖ್ಯಮಂತ್ರಿಗಳು.

ಬಳಿಕ ತಮ್ಮ ಸಿಬ್ಬಂದಿಗೆ , ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button