*ಮುಂದಿನ ವರ್ಷದಿಂದ ದ್ವಿಭಾಷಾ ನೀತಿ ಜಾರಿ: ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಶಾಲಾಮಕ್ಕಳಿಗೆ ಜಾಗತಿಕ ಮಟ್ಟದ ಸ್ಪರ್ಧೆ ಎದುರಿಸಲು ಅನುಕೂಲವಾಗುವಂತೆ ಮುಂದಿನ ವರ್ಷದಿಂದ ಎಲ್ಲಾ ಶಾಲೆಗಳಲ್ಲಿ ದ್ವಿಭಾಷಾ ನೀತಿ ಕನ್ನಡ ಮತ್ತು ಇಂಗ್ಲಿಷ್ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶೇಕಡಾ 100ರಷ್ಟು ಶಾಲೆಗಳಿಗೆ ವಿಸ್ತರಣೆ ರಾಜ್ಯದಲ್ಲಿ ಈಗಾಗಲೇ ಶೇಕಡಾ 50ರಷ್ಟು ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಮಕ್ಕಳು ಆರಂಭಿಕ ಹಂತದಿಂದಲೇ ಕನ್ನಡದ ಜೊತೆಗೆ ಆಂಗ್ಲ ಭಾಷೆಯನ್ನೂ ಕಲಿಯುತ್ತಿದ್ದಾರೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ಈ ಯೋಜನೆಯನ್ನು ರಾಜ್ಯದ ಶೇಕಡಾ 100ರಷ್ಟು ಶಾಲೆಗಳಿಗೆ ವಿಸ್ತರಿಸುವ ಗುರಿ ಹೊಂದಲಾಗಿದೆ, ಎಂದು ಸಚಿವರು ವಿವರಿಸಿದರು.
ಗ್ರಾಮೀಣ ಭಾಗದ ಮಕ್ಕಳಿಗೆ ವ್ಯವಹಾರಿಕ ಮತ್ತು ಔದ್ಯೋಗಿಕವಾಗಿ ಇಂಗ್ಲಿಷ್ ಕಲಿಕೆಯ ಅಗತ್ಯವಿದೆ. ಸಮಾಜದಲ್ಲಿ ಸಮಾನತೆ ತರಲು ಶಿಕ್ಷಣವೇ ಪ್ರಬಲ ಅಸ್ತ್ರ ಸಮಾನ ಶಿಕ್ಷಣದ ಮೂಲಕವೇ ಸಾಮಾಜಿಕ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಆಶಯವಾಗಿದೆ ಎಂದರು.


