Latest

ಸಿದ್ದರಾಮಯ್ಯ ಸ್ಪೀಕರ್ ಗೆ ಪತ್ರ ಬರೆದು ಹಕ್ಕುಚ್ಯುತಿ ಎಂದಿದ್ದೇಕೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸುದೀರ್ಘ ಪತ್ರ ಬರೆದಿದ್ದು, ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಿರಾಕರಿಸಿರುವ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ.

ಕೊರೊನಾ ನಿರ್ವಹಣೆ ಬಗ್ಗೆ ಡಿಸಿಗಳ ಜೊತೆ ಸಭೆ ನಡೆಸಬೇಕು. ಅವರಿಂದ ವಾಸ್ತವ ಮಾಹಿತಿ ಪಡೆದುಕೊಳ್ಳಬೇಕಿದೆ. ಆದರೆ ವಿಡಿಯೋಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ನಿರಾಕರಿಸಿರುವ ರಾಜ್ಯ ಸರ್ಕಾರ ಕೇವಲ ಪತ್ರದ ಮೂಲಕ ಮಾಹಿತಿ ಪಡೆಯಿರಿ ಎಂದು ತಿಳಿಸಿದೆ. ನಮಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಹೇಳಿದ್ದಾರೆ.

ರಾಜ್ಯದ ಆರ್ಥಿಕ, ಕೃಷಿ ವಲಯ ಸೇರಿದಂತೆ ಪ್ರತಿ ಕ್ಷೇತ್ರದಲ್ಲಿ ಉಂತಾಗಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಪರಿಹರಿಸಲು ಸಲಹೆ ನಿಡಬೇಕಾಗಿದೆ. ಸಲಹೆ ನೀಡುವುದು ವಿಪಕ್ಷ ನಾಯಕನ ಶಾಸನಾತ್ಮಕ ಅಧಿಕಾರ. ವಿಪಕ್ಷ ನಾಯಕರಿಗೆ ಮಾಹಿತಿ ನೀಡಬೇಕಿರುವುದು ಸರ್ಕಾರದ ಜವಾಬ್ದಾರಿ. ಆದರೆ ವಿಪಕ್ಷ ನಾಯಕರಿಗೆ ಮಾಹಿತಿ ನೀಡಲು ನಿರಾಕರಿಸಿ ಹಕ್ಕುಚ್ಯುತಿ ಮಾಡಿದೆ.

ಕಳೆದ ಎರಡು ವರ್ಷಗಳಿಂದ ನಾವು ಕೇಳುತ್ತಿರುವ ಮಾಹಿತಿಯೊಂದಾದರೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿಯೇ ಒಂದು. ಮಾಹಿತಿ ನೀಡಬೇಕಾದ ನಮೂನೆಯನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಭರ್ತಿ ಮಾಡುವಷ್ಟು ತಿಳುವಳಿಕೆ ಅವರಿಗೆ ಕಡಿಮೆ. ಇಂತಹ ಗೊಂದಲಗಳಿಗೆ ಅವಕಾಶ ನೀಡಬಾರದು. ಹೀಗಾಗಿ ವಿಡಿಯೋಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ಉದ್ದೇಶಿಸಿದ್ದೆವು. ಆದರೆ ಸರ್ಕಾರ ಇದನ್ನು ನಿರಾಕರಿಸಿರುವುದು ಸಂವಿಧಾನದ ಹಲವು ಅನುಚ್ಛೇದದ ಪ್ರಕಾರ ಹಕ್ಕು ಚ್ಯುತಿಯಾಗಿದೆ ಎಂದು ತಿಳಿಸಿದ್ದಾರೆ.

4.9 ಕೆಜಿ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಆರೋಪಿ ಕಿರಣ್ ಹೊಸ ಮುಖ ಅನಾವರಣ

ಬೆಳಗಾವಿ ಸೇರಿ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ; ಇನ್ನಷ್ಟು ಕಠಿಣ ನಿಯಮ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button