Politics

*ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರಿಗೆ ವಿಶೇಷ ಅನುದಾನಕ್ಕೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಥಮ ಬಾರಿಗೆ ಆಯ್ಕೆಯಾದ ಶಾಸಕರ ಕ್ಷೇತ್ರಗಳಿಗೆ ವಿಶೇಷ ಅನುದಾನ ನೀಡುವಂತೆ ಕೋರುವ ಮನವಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಕ್ಷೇತ್ರದ ಶಾಸಕ ಯಶ್‍ಪಾಲ್ ಎ.ಸುವರ್ಣ ಅವರ ನೇತೃತ್ವದಲ್ಲಿ ಸಲ್ಲಿಸಲಾಯಿತು.

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ 1 ವರ್ಷ 7 ತಿಂಗಳು ಕಳೆದಿದ್ದು, 5ನೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಕ್ಷೇತ್ರದ ಜನರಿಗೆ ನೂತನವಾಗಿ ಆಯ್ಕೆಯಾದ ನಮ್ಮೆಲ್ಲ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ನಿರ್ವಹಣಾ ಕಾಮಗಾರಿಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದೇವೆ ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.

ನಾವು ಶಾಸಕರಾದಾಗಿನಿಂದ ಯಾವುದೇ ಗಮನಾರ್ಹ ಅನುದಾನ ಲಭಿಸಿಲ್ಲ. ಇದರಿಂದ ಜನರ ಆದ್ಯತೆಯ ಬೇಡಿಕೆಗಳು, ತುರ್ತು ಅಗತ್ಯಗಳು ಹಾಗೂ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ಮತ್ತು ಅಭಿವೃದ್ಧಿಯ ಕಾಮಗಾರಿಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಗಮನ ಸೆಳೆದಿದೆ.

ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ 2023-24 ಮತ್ತು 2024-25ನೇ ಸಾಲಿಗೆ ತಲಾ ರೂ. 50 ಕೋಟಿ, ಒಟ್ಟಾರೆ ರೂ. 100 ಕೋಟಿ ಅನುದಾನ ಮಂಜೂರು ಮಾಡಿಸಿ, ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button