Latest

*ದೌರ್ಜನ್ಯ ತಡೆ ಅಧಿನಿಯಮ: ಡಿಸಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: AC ನೇತೃತ್ವದಲ್ಲಿ ದೌರ್ಜನ್ಯ ತಡೆ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಸಭೆಯನ್ನೇ ನಡೆಸದ 13 ಉಪ ವಿಭಾಗಗಳ ಬಗ್ಗೆ ಜಿಲ್ಲಾಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಇಲಾಖಾವಾರು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಮಾಯ್ಯ, ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು ಎಂದರು.

ಸಿಂಧುತ್ವ ಪ್ರಮಾಣ ಪತ್ರ
ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Home add -Advt

ಅಂಬೇಡ್ಕರ್‌ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Related Articles

Back to top button