Politics

*ಒಂದೇ ವರ್ಷದಲ್ಲಿ 13,477 ಬಾಲ ಗರ್ಭಿಣಿಯರು : ಅಧಿಕಾರಿಗಳಿಗೆ ಸಿಎಂ ಕ್ಲಾಸ್*

ಪ್ರಗತಿವಾಹಿನಿ ಸುದ್ದಿ: ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಪ್ರಕರಣ ತಡೆಗಟ್ಟುಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಇಲಾಖಾವಾರು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಖಡಕ್ ಸೂಚನೆ ನೀಡಿದರು.

Home add -Advt

ಬಾಲ್ಯ ಗರ್ಭಿಣಿ ಪ್ರಕರಣ ತಡೆಗೆ ಕ್ರಮ
ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದರು.

Related Articles

Back to top button