Politics

*ತಾಯಂದಿರ ಮರಣ, ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಸೂಚನೆ*

ಹೆಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಅಗತ್ಯವಿಲ್ಲ

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ಸಭೆಯ ಮುಖ್ಯಾಂಶಗಳು:

• ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ.

• ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ.

• ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.

• ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಇದಕ್ಕಾಗಿ ಕಡಿಮೆ ಹೆರಿಗೆ ಪ್ರಮಾಣವಿರುವ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಪುನರ್‌ ನಿಯೋಜನೆ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು.

• ಔಷಧಿ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

• ಒಟ್ಟು 3927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು.

• ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

• ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು.

• ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ.

• ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ಚಿಕಿತ್ಸಾ ಪ್ಯಾಕೇಜ್‌ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು.

• ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮಗ್ರ ಸುಧಾರಣೆಯಾಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಖಾತ್ರಿಪಡಿಸಿದರೆ ಮಾತ್ರ ಜನರ ಖಾಸಗಿ ಆಸ್ಪತ್ರೆಗಳ ಅವಲಂಬನೆ ಕಡಿಮೆ ಮಾಡಬಹುದು.

• ಹೆಎಂಪಿವಿ ವೈರಸ್‌ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಇದು ಪ್ರಾಣಾಂತಿಕವಲ್ಲ. ಇದನ್ನು ಪರೀಕ್ಷೆ ಮಾಡುವ ಅಗತ್ಯವಿರುವುದಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button