
ಪ್ರಗತಿವಾಹಿನಿ ಸುದ್ದಿ; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಒಂದೆಡೆ ಬೆಂಗಳೂರಿನಿಂದ ಮೈಸೂರುನವರೆಗೆ ಪಾದಯಾತ್ರೆ ಆರಂಭಿಸಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಮೈಸೂರಿನ ತಮ್ಮ ನಿವಾಸದಲ್ಲಿ ಸಚಿವರು, ಶಾಸಕರ ದಿಢೀರ್ ಸಭೆ ನಡೆಸಿದರು.
ಮೈಸೂರಿನ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಚಾಮರಾಜನಗರ, ಮಡಿಕೇರಿ ಮತ್ತು ಮೈಸೂರು ಜಿಲ್ಲಾ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಮುಖಂಡರುಗಳೊಂದಿಗೆ ಬೆಳಗಿನ ಉಪಹಾರ ಸೇವಿಸಿದರು. ಇದೇ ವೇಳೆ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ