Politics

*ಅನಧಿಕೃತ ಬಡಾವಣೆಗಳಿಗೆ ಕಡಿವಾಣ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ನೀಡಿದ ಸ್ಪಷ್ಟ ಸೂಚನೆಗಳು:

ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ

ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ.

Home add -Advt

ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿ

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ*

ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ*

ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ*

This is only one time measure

ನಿಮಗೆ 3 ತಿಂಗಳು ಮಾತ್ರ ಟೈಮ್ ಕೊಟ್ಟಿದ್ದೀವಿ. ಇಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ

ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ

ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಿ ಆಗ್ತೀರಿ. ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ತಗೊತೀವಿ*

ಮಧ್ಯವರ್ತಿಗಳಿಗೆ, ಬ್ರೋಕರ್ ಗಳಿಗೆ ತಕ್ಷಣ ಗೇಟ್ ಪಾಸ್ ಕೊಡಿ

ಇದನ್ನು ಮತ್ತು ಕಾಯ್ದೆಯ ದೂರದೃಷ್ಟಿಯನ್ನು ನೀವೆಲ್ಲರೂ ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಿ.

ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು.

ಅನಧಿಕೃತ , ರೆವಿನ್ಯೂ ಬಡಾವಣೆಗಳಲ್ಲಿ ಸೈಟು, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು. ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು one time solution ಕೊಟ್ಟಿದ್ದೀವಿ. 3 ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ ಹಾಡಿ

ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರೂ ಸ್ಪಷ್ಟಪಡಿಸಿದ್ದೀವಿ. ಹೊಸ confusion ಗಳಿಗೆ, ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ

ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರು ಮಾಡಿ ಎಂದು ಸೂಚಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button