Belagavi NewsBelgaum NewsKarnataka NewsLatestPolitics

*ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ*

Home add -Advt

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದಕ್ಕೆ ಅವರ ಬೆಂಬಲಿಗರು ವಿವಿಧ ಕಡೆ ಪ್ರತಿಭಟನೆ ನಡೆಸಿದರು.

ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರಿಂದ
ಹಿರೇಬಾಗೇವಾಡಿ ಟೋಲ್ ಬಳಿಯಲ್ಲಿ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ಥ ಉಂಟಾಯಿತು.

ಏಕಾಏಕಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ

ಲಕ್ಷ್ಮೀ ಹೆಬ್ಬಾಳಕರ್ ಅವರ ನೂರಾರು ಅಭಿಮಾನಿಗಳು ಏಕಾಏಕಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ವಾಹನಗಳನ್ನು ತಡೆದು ಆಕ್ರೋಶ ಹೊರ ಹಾಕಿದರು.
ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವ ಸ್ಥಾನ ಕೊಡಬೇಕೆಂದು ರಸ್ತೆ ನಡೆದರು. ಪ್ರತಿಭಟನಾಕಾರರ‌ ಮನವೊಲಿಸಲು ಪೊಲೀಸರು ಪರದಾಟ ನಡೆಸಿದರು.‌

ಡಿಕೆಶಿ ಸಂಪುಟದಲ್ಲಿ ಸೇರಲು ಲಕ್ಷ್ಮೀ ಹೆಬ್ಬಾಳಕರ್ ಕೊನೆಯ ವರೆಗೆ ಪ್ರಯತ್ನ ಮಾಡಿದರು.‌ ಆದರೆ ಕೊನೆಗೂ ತೀವ್ರ ನಿರಾಸೆ ಉಂಟಾಗಿದೆ. ಹಾಗಾಗಿ ಹಿರೇಬಾಗೇಬಾಡಿ ಟೋಲ್ ಬಳಿ ಹಾಗೂ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬೆಂಬಲಿಗರು ಆಕ್ರೋಶ ಹೊರಹಾಕಿದರು.


ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೀಡಿದರು.

Related Articles

Back to top button