

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಸಂಸತ್ ಭವನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಈ ವೇಳೆ ಮನವಿ ಮಾಡಿದರು. ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಇದೇ ಮೊದಲ ಬಾರಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರಿಗೆ ಅಂಬಾರಿ ಹೊತ್ತಿರುವ ಆನೆಯನ್ನು ಉಡುಗೊರೆಯಾಗಿ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ