*ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮತದಾರರಿಗೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಆಮಿಷವೊಡ್ಡಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಹಿ ಇರುವ ಗ್ಯಾರಂಟಿ ಕಾರ್ಡ್ ಗಳನ್ನು ರಾಜ್ಯದಲ್ಲಿ ವಿತರಿಸಿದ್ದರು.
ಚುನಾವಣೆಯಲ್ಲಿ ಆಮಿಷವೊಡ್ಡುವುದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ತಪ್ಪು. ಮತದಾರರಿಗೆ ಆಮಿಷ ನೀಡಿ ಸಿಎಂ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಕೆ.ಎಂ.ಶಂಕರ ಎಂಬುವವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಕಚೇರಿಯ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚಿಸಿ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ