
ಪ್ರಗತಿವಾಹಿನಿ ಸುದ್ದಿ: ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಬಗ್ಗೆ ಪಾಠ ಮಾಡಿದ್ದಾರೆ.
250 ವಿದ್ಯಾರ್ಥಿಗಿರುವ ಶಾಲೆ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು. ಮೊದಲಿಗೆ 10 ನೇ ತರಗತಿಗೆ ಸಿಎಂ ಮತ್ತು ಸಚಿವ ಹೆಚ್ ಸಿ ಮಹದೇವಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಪಠ್ಯ, ಬಾತ್ ರೂಂ ಕಿಟ್ ಗಳ ಸಮರ್ಪಕ ವಿತರಣೆ ಆಗ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು. ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ…ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆಗಾಗ ಪಲಾವ್ ಕೊಡ್ತಾರೆ ಎಂದು ವಿದ್ಯಾರ್ಥಿಗಳು ಖುಷಿ ವ್ಯಕ್ತಪಡಿಸಿದ್ದಾರೆ.
ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ ಎಂದು ಸಿಎಂ ಗೆ ವಿದ್ಯಾರ್ಥಿಗಳು ವಿವರಿಸಿದ್ದಾರೆ.
ಇದೇ ವೇಳೆ ಕಳೆದ ಬಾರಿ SSLC ಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಒಬ್ಬ ವಿಧ್ಯಾರ್ಥಿನಿ ಮಾತ್ರ ಸೆಕೆಂಡ್ ಬಂದಿದ್ದಾಗಿ ಶಿಕ್ಷಕರು ವಿವರಣೆ ನೀಡಿದ್ದಾರೆ.

ಮಕ್ಕಳಿಗೆ ಬಸವಣ್ಣನವರ ಮಹತ್ವ ತಿಳಿಸಿದ ಸಿಎಂ:
ಇದೇ ವೇಳೆ ಸಿಎಂ ಸಿದ್ದರಾಮಯ್ಯ, ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿದ್ದು ಏಕೆ ಎಂದು ಕೇಳಿದರು. ಮನುಷ್ಯರ ನಡುವಿನ ತಾರತಮ್ಯ, ಜಾತಿ ವ್ಯವಸ್ಥೆ ವಿರೋಧಿಸಿ ಸಾಮಾಜಿಕ ಕ್ರಾಂತಿ ನಡೆಸಿದ ಬಸವಣ್ಣನವರು…ಎಂದು ಸಿಎಂ ತಾವೇ ಮಕ್ಕಳಿಗೆ ಉತ್ತರಿಸಿದರು.
ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ…:
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಕ್ಕಳಿಗೆ ವ್ಯಾಕರನದ ಬಗ್ಗೆ ಪಾಠ ಮಾಡಿದರು. ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.
ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು, ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನಿಸಿದ್ದಾರೆ.
ಈ ವೇಳೆ ವಿದ್ಯಾರ್ಥಿಗಳು ನೀವೇ ಆರಂಭಿಸಿದ್ದು ಎಂದಿದ್ದಾರೆ. ಬಳಿಕ ಸಿಎಂ 94-95 ರಲ್ಲಿ ನಾನೇ ಆರಂಭಿಸಿದ್ದಾಗಿ ಸಿಎಂ ಹೇಳಿದರು. ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.
ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, MLC ಪ್ರಕಾಶ್ ರಾಥೋಡ್ ಸೇರಿ ಇತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ