NationalPolitics

*ಸಂಸದರೆದುರು ಕೇಂದ್ರದ ಮುಂದಿರುವ ರಾಜ್ಯದ ಬೇಡಿಕೆ ಪಟ್ಟಿ ತೆರೆದಿಟ್ಟ ಸಿಎಂ*

ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೋರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Home add -Advt

ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು,ಹಲವು ವಿಚಾರಗಳು ಪ್ರಸ್ತಾಪಿಸಿದರು.

ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ ವಿಚಾರಗಳ ಹೈಲೈಟ್ಸ್ :

ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಅಗತ್ಯವಿದೆ. ಭದ್ರಾ ಯೋಜನೆ ಬಗ್ಗೆಯೂ ಪ್ರಯತ್ನ ಮುಂದುವರೆಸಬೇಕಾಗಿದೆ. ಕೇಂದ್ರದ ಹಣಕಾಸು ಮಂತ್ರಿ ತಮ್ಮ ಬಜೆಟ್ ನಲ್ಲೇ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ. ಆ ಹಣ ಕೊಡಿಸಿ ಕೊಡಲು ಸಭೆಯಲ್ಲಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ ಮಾಡಿದರು

ಕಲ್ಯಾಣ ಕರ್ನಾಟಕದ ರಾಯಚೂರಿಗೆ ಏಮ್ಸ್ ನೀಡಲು ಮನವಿ ಸಲ್ಲಿಸಿದ್ದೇವೆ. ಇದರ ಈಡೇರಿಕೆ ಅಗತ್ಯವಿದೆ*

*ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದಿದೆ. ಏಮ್ಸ್ ಬಂದರೆ ಅಭಿವೃದ್ಧಿ ಸಾಧ್ಯ.


*18172 ಕೋಟಿ ಬರ ಪರಿಹಾರ ಕೇಳಿದ್ದೆವು. ಪೂರ್ತಿ ಬಂದಿಲ್ಲ. ಇದಕ್ಕಾಗಿ ಪ್ರಯತ್ನಿಸುವ ಅಗತ್ಯವಿದೆ.

*ರಾಜ್ಯದ ಕರಾವಳಿ ಭಾಗಗಳ ಅಭಿವೃದ್ಧಿಗಾಗಿ ಉಡಾನ್ ಯೋಜನೆಯಲ್ಲಿ ಸಲ್ಲಿಸಿರುವ ಪ್ರಸ್ತಾವನೆ ನಾಗರೀಕ ವಿಮಾನಯಾನ ಇಲಾಖೆಯಲ್ಲಿ ಇದೆ. ಇದರ ಈಡೇರಿಕೆಗೆ ಪ್ರಯತ್ನಿಸಬೇಕಾಗಿದೆ.

*ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು Air cargo complex ಆಗಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರಿಂದ ರಫ್ತು ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗಗೊಳ್ಳಯತ್ತದೆ.

*ಮೈಸೂರು ಅಥವಾ ಹಾಸನಕ್ಕೆ ಮತ್ತೊಂದು IIT ಬೇಕು ಎನ್ನುವ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದೇವೆ. ಇದು ಈಡೇರಿಸಬೇಕಾಗಿದೆ.

*ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಮನವಿ ಮಾಡಿದ್ದೇವೆ. ಇದನ್ನು ಕೂಡಲೇ ಅಂಗೀಕರಿಸಿ ಪಶ್ಚಿಮ‌ಘಟ್ಟದ ಜನರಿಗೆ ನೆಮ್ಮದಿ ಒದಗಿಸಬೇಕು.

*ರಾಜ್ಯ ರೈಲ್ವೇ ಸಂಪರ್ಕದಲ್ಲಿ ಹಿಂದುಳಿದಿದೆ. ಆದ್ದರಿಂದ ಆದ್ಯತೆ ಮೇಲೆ ರಾಜ್ಯಕ್ಕೆ ಹೆಚ್ಚು ಅನುದಾನ ಒದಗಿಸಿ ರೈಲ್ವೇ ಸಂಪರ್ಕ ಹೆಚ್ಚಿಸಲು ಆಧ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು ಎಂದು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಿಎಂ ಮನವಿ ಮಾಡಿದರು.

*ಗ್ರಾಮ ಸಡಕ್ ಯೋಜನೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಿಂದುಳಿದಿದೆ. ಇದನ್ನು ಸರಿದೂಗಿಸಬೇಕಾಗಿದೆ.

15ನೇ ಹಣಕಾಸು ಆಯೋಗದಲ್ಲಿ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 16ನೇ ಆಯೋಗದ ಮುಂದೆ ಪ್ರಭಲ ವಾದ ಮಂಡಿಸಬೇಕಾಗಿದೆ

*ಕಳಸಾ ಬಂಡೂರಿ ಯೋಜನೆಗೆ ಪಾರಿಸಾರಿಕ ಒಪ್ಪಿಗೆ ಅಗತ್ಯವಿದೆ. ಇದು ಬಾಕಿ ಇರುವುದರಿಂದ ಕೆಲಸ ಶುರು ಮಾಡಲು ಸಾಧ್ಯವಾಗಿಲ್ಲ.

1971 ಸೆನ್ಸಸ್ ಪರಿಗಣಿಸಿದ್ದರೆ ನಮಗೆ , ನಮ್ಮ ರಾಜ್ಯಕ್ಕೆ ಅನ್ಯಾಯ ಆಗಲು ಸಾಧ್ಯವಾಗುತ್ತಿರಲಿಲ್ಲ. 15 ನೇ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಿರುವ ಮತ್ತು ಬಜೆಟ್ ನಲ್ಲಿ ಕೇಂದ್ರ ಸರ್ಕಾರವೇ ರಾಜ್ಯಕ್ಕೆ ಘೋಷಿಸಿರುವ ಮೊತ್ತವನ್ನು ಒದಗಿಸಿಕೊಡಬೇಕು ಎಂದು ಮನವಿ

*input ಸಬ್ಸಿಡಿ ಸಮರ್ಪವಾಗಿ ಒದಗಿಸಿಕೊಳ್ಳಬೇಕಾಗಿದೆ.

ಈ ಎಲ್ಲಾ ಬೇಡಿಕೆ, ಯೋಜನೆ, ಪ್ರಸ್ತಾವನೆಗಳ ಮಂಜೂರಾತಿಗೆ ಮನವಿ ಮಾಡುತ್ತೇನೆ. ಈ ಮನವಿಗಾಗಿ ಈ ಸೌಹಾರ್ದ ಸಭೆ ನಡೆಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದರಲ್ಲಿ ರಾಜಕೀಯ, ಟೀಕೆ, ಭಾವನಾತ್ಮಕ ಆರೋಪಗಳ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಸೌಹಾರ್ದಯುತವಾಗಿ ಪ್ರಯತ್ನಿಸೋಣ ಎನ್ನುವುದಷ್ಟೆ ನನ್ನ ಮನವಿ.

ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ ಈ ಬಗ್ಗೆ ಧ್ವನಿ ಎತ್ತಬೇಕಾಗಿ ಮನವಿ ಎಂದು ಸಿಎಂ ತಮ್ಮ ಪ್ರಾಸ್ತಾವಿಕವಾಗಿ ನುಡಿದರು.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button