Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ವಿರುದ್ಧ ಮೂಡಾ ಸೈಟ್ ಹಂಚಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಕ್ಷಾಧಾರಗಳ ಕೊರತೆ ಇದೆ ಎಂದು ಕ್ಲೀನ್ ಚಿಟ್ ನೀಡಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಇದನ್ನು ಆಕ್ಷೇಪಿಸಿ ಸ್ನೇಹಮಯಿ ಕೃಷ್ಣ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನಡೆಯಿತು. ಸಿದ್ದರಾಮಯ್ಯ, ಪತ್ನಿ ವಿರುದ್ಧ ಯಾವುದೇ ಸಾಕ್ಷ್ಯಗಳು ಕಂಡುಬಂದಿಲ್ಲ. 70 ಸಾಕ್ಷ್ಯಗಳಲ್ಲಿ ಯಾರೂ ಪ್ರಭಾವ ಬೀರಿರುವುದಾಗಿ ಹೇಳಿಲ್ಲ. ಎಲ್ಲಾ ಅಂಶಗಳನ್ನು ಪರಿಗಣಿಸಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಬಿ ರಿಪೋರ್ಟ್ ತಿರಸ್ಕರಿಸಬಹುದಾದ ಲೋಪಗಳಿಲ್ಲ ಎಂದು ಲೋಕಾಯುಕ್ತ ಎಸ್ ಪಿಪಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದರು.

Home add -Advt

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಬಿ ರಿಪೋರ್ಟ್ ಸಂಬಂಧ ಜನವರಿ 22 ರಂದು ಆದೇಶ ನೀಡುವುದಾಗಿ ತಿಳಿಸಿ ಆದೇಶ ಕಾಯ್ದಿರಿಯಿಸಿದ್ದಾರೆ.

Related Articles

Back to top button