ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಲೋಕಾಯುಕ್ತ ಎಸ್ ಪಿ ಉದೇಶ್ ಎಫ್ಐಆರ್ ದಾಖಲಿಸಿದ್ದು, ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಲಾಗಿದೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದು, ಸಿಎಂ ಪತ್ನಿ ಪಾರ್ವತಿ ಎ2, ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂಮಾಲೀಕ ದೇವರಾಜು ಎ4 ಹಾಗೂ ಇತರರು ಎ5 ಆಗಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ