ಪ್ರಗತಿವಾಹಿನಿ ಸುದ್ದಿ: ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಪ್ರಕರಣ ಇದೀಗ ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದೊಡ್ಡಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ ಎನ್.ಆರ್.ರಮೇಶ್, ಸಿಎಂ ಸಿದ್ದರಾಮಯ್ಯ ರಾಜ್ಯ ಕಂಡ ಅತಿಭ್ರಷ್ಟ ಮುಖ್ಯಮಂತ್ರಿ ಎಂದು ವಾಗ್ದಾಳಿ ನಡೆಸಿದರು.
ಮುಡಾದಿಂದ ಅಕ್ರಮವಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿಗೆ 14 ಸೈಟ್ ಗಳು ನೋಂದಣಿಯಾಗಿವೆ. ಇದರ ಮೂಲ ದಾಖಲೆಗಳು ಸೇರಿದಂತೆ ಒಟ್ಟು 400 ಪುಟಗಳ ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಭಾವ, ಮುಡಾ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ