ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಆರ್ ಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದಾರೆ. ಸಿಎಂ ಪತ್ನಿ ಪಾರ್ವತಿ ಎ2 ಆರೋಪಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ3 ಹಾಗೂ ಜಮೀನು ಮಾರಿರುವ ದೇವರಾಜು ಎ4 ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿತ್ತು. ಕೋರ್ಟ್ ಆದೆಶ ನೀಡಿದ 48 ಗಂಟೆಗಳ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ