ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾ ಹಗರಣ ಕುರಿತ ಪ್ರಕರಣದ ಮುಂದಿನ ಪ್ರಕ್ರಿಯೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಾಹಂ ಹೈಕೋರ್ಟ್ ನ ತೀರ್ಪಿನ ಪ್ರತಿ ಹಿಡಿದು ಜನಪ್ರತಿನಿಧಿಗಳ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಲು ಸಿದ್ಧತೆ ನಡೆಸಿದ್ದಾರೆ.
ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಈ ವೇಳೆ ಕೋರ್ಟ್ ತನಿಖೆಗೆ ಆದೇಶ ನೀಡಿದರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐ ಆರ್ ದಾಖಲಾಗಲಿದೆ.
ಈ ಮಧ್ಯೆ ಕಾಂಗ್ರೆಸ್ ನಲ್ಲಿ ತೀವ್ರ ಬೆಳವಣಿಗೆ ನಡೆಯುತ್ತಿದೆ. ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ