ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ಹೆಚ್ಚಳ ಮಾಡಲಾಗುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿದಿದ್ದಾರೆ.
ನಾ ನಾಯಕಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಮಹಿಳೆಯರ ಪರವಾಗಿ ಇಲ್ಲ. ಅಧಿಕಾರಕ್ಕೆ ಬಂದು ಮೂರುವರೆ ವರ್ಷಗಳಾದರೂ ಮಹಿಳೆಯರಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಎಲ್ಲಿಯವರೆಗೆ ದೇಶದಲ್ಲಿ ಮಹಿಳೆಯರ ಅಭಿವೃದ್ಧಿ ಆಗುವುದಿಲ್ಲವೋ, ಅಲ್ಲಿಯವರೆಗೂ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ. ಕಾಂಗ್ರೆಸ್ ಮಹಿಳೆಯರಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮೀಸಲಾತಿ ಹೆಚ್ಚಳ ಮಾಡುತ್ತೇವೆ. ಮಹಿಳೆಯರಿಗೆ ರಾಜಕೀಯದಲ್ಲಿ ಶೇ.33ರಷ್ಟು ಮೀಸಲಾತಿ ನೀಡುತ್ತೇವೆ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆಯಲ್ಲಿಯೂ ಮೀದ್ಸಲಾತಿ ಹೆಚ್ಚಿಸುತೇವೆ ಎಂದರು.
ಬಿಜೆಪಿ ನಾಯಕರು ಕೇವಲ ಭರವಸೆಗಳನ್ನು ಕೊಡುತ್ತಿದ್ದಾರೆ. ಈ ಹಿಂದೆ ಬಿಜೆಪಿ ಘೋಷಿಸಿದ್ದ ಭರವಸೆಗಳಲ್ಲಿ 50-60ರಷ್ಟು ಮಾತ್ರ ಈಡೇರಿಸಿದ್ದಾರೆ. ಬಿಜೆಪಿ ಸರ್ಕಾರ ಮಹಿಳೆಯರ ಪರವಿಲ್ಲ ಎಂದು ವಾಗ್ದಾಳಿ ನಡೆಸಿದರು.
*ನಾ ನಾಯಕಿ ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ವ್ಯಂಗ್ಯ*
https://pragati.taskdun.com/priyanka-gandhikarnataka-visitcm-basavaraj-bommaireaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ