Latest

ಕಟೀಲ್ ಹಿಂದುವಾದರೆ ಅಖಂಡ ಶ್ರೀನಿವಾಸ್ ಮೂರ್ತಿ ಯಾಕೆ ಹಿಂದುವಲ್ಲ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ಪರವೋ? ಇಲ್ಲ ಭಯೋತ್ಪಾದಕರ ಪರವೋ? ಎಂದು ಪ್ರಶ್ನಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಳಿನ್ ಕುಮಾರ್‌ ಕಟೀಲ್ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ,‌ ನಳಿನ್ ಕುಮಾರ್‌ ಕಟೀಲ್ ಅವರೇ, ನೀವು ದಲಿತರ ಪರವೋ? ಹಿಂದೂಗಳ ಪರವೋ? ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಕೇಳಿದ್ದಾರೆ.

Home add -Advt

ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದು ತಿಳಿಸಿದ್ದಾರೆ.

Related Articles

Back to top button