Politics

*ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ನಮಸ್ಕರಿಸಿದ ಪ್ರತಾಪ್ ಸಿಂಹ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಾದಾಕಾಲ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಇಂದು ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿರುವ ಪ್ರಸಂಗ ಕುತೂಹಲಕ್ಕೆ ಕಾರಣವಗಿದೆ.

ಮೈಸೂರಿನಲ್ಲಿ ನಡೆದ ವಿ.ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ವೇದಿಕೆ ಬರುತ್ತಿದ್ದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರು, ಶಾಸಕರು, ಸಂಸದರು ಎದ್ದು ನಿಂತು ಗೌರವ ಸೂಚಿಸಿದರು. ಎಲ್ಲರಿಗೂ ಕೈ ಮುಗಿಯುತ್ತಾ ವೇದಿಕೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಪ್ರತಾಪ್ ಸಿಂಹ ಕಾಲಿಗೆರಗಿ ನಮಸ್ಕರಿಸಿ ಆತ್ಮೀಯವಾಗಿ ಬರಮಾಡಿಕೊಂಡರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಾಪ್ ಸಿಂಹ ಹೆಗಲ ಮೇಲೆ ಕೈಯಿಟ್ಟು ಮುಗುಳ್ನಕ್ಕರು. ಸದಾಕಾಲ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದ ಪ್ರತಾಪ್ ಸಿಂಹ ಇಂದು ಸಿದ್ದರಾಮಯ್ಯ ವೇದಿಕೆ ಬರುತ್ತಿದ್ದಂತೆ ವಿನಮ್ರವಾಗಿ ನಡೆದುಕೊಂಡ ರೀತಿ ಅಚ್ಚರಿಗೆ ಕಾರಣವಾಗಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button