
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ಉತ್ತರ ಪ್ರದೇಶದ 5 ಜಿಲ್ಲೆಗಳಲ್ಲಿ ಜಾರಿಯಾಗಿದ್ದ ಲಾಕ್ ಡೌನ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಉತ್ತರಪ್ರದೇಶದ ಪ್ರಯಾಗ್ ರಾಜ್, ಲಕ್ನೋ, ವಾರಣಾಸಿ, ಕಾನ್ಪುರ, ಗೋರಖ್ ಪುರ ನಗರಗಳಲ್ಲಿ ಏಪ್ರಿಲ್ 26ರವರೆಗೆ ಲಾಕ್ ಡೌನ್ ಜಾರಿ ಮಾಡಲು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಅಲ್ಲದೇ ಕೊರೊನಾ ನಿಯಂತ್ರಣಕ್ಕೆ ಸಿಎಂ ಆದಿತ್ಯನಾಥ್ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ಈ ನಡುವೆ ಉತ್ತರ ಪ್ರದೇಶ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ವೀಕೆಂಡ್ ಲಾಕ್ ಡೌನ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಶನಿವಾರ ಹಾಗೂ ಭಾನುವಾರ ಎರಡು ದಿನ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಿದೆ.