Latest

*ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಗಳಿಗೆ ಸಿದ್ದರಾಮಯ್ಯ ಸ್ಪಷ್ಟನೆ*

ಪ್ರಗತಿವಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತು ಎಂಬ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪಕ್ಕೆ ಉತ್ತರ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಕಾನೂನು ಜ್ಞಾನವಿರಬಹುದು ಅಂದುಕೊಂಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿಗಳು ಸದನದಲ್ಲಿ ನಿನ್ನೆ ಸುಳ್ಳು ಹೇಳಿದ್ದಾರೆ. ಕೆಲ ವಿಷಯವಾಗಿ ವೀರಾವೇಷದಲ್ಲಿ ಮಾತನಾಡಿದ್ದಾರೆ. ತಮ್ಮ ಭ್ರಷ್ಟಾಚಾರ ಮುಚ್ಚಿ ಹಾಕಲು ಎಸಿಬಿ ರಚನೆ ಮಾಡಿ ಲೋಕಾಯುಕ್ತ ಮುಚ್ಚಿದರು ಎಂದು ಆರೋಪಿಸಿದ್ದಾರೆ. ದೇಶದ 16 ರಾಜ್ಯಗಳಲ್ಲಿ ಎಸಿಬಿ ಹಾಗೂ ಲೋಕಾಯುಕ್ತ ಎರಡೂ ಸಂಸ್ಥೆಗಳಿವೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿಯೂ ಎಸಿಬಿ ಇದೆ. ಎಸಿಬಿ ಪರವಾಗಿ ಸರ್ಕಾರದ ಪರ ಅಡ್ವಕೆಟ್ ಜನರಲ್ ಅವರೇ ಕೋರ್ಟ್ ನಲ್ಲಿ ಮಾತನಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ಕಾನೂನು ಜ್ಞಾನವಿದೆ? ಸಿಎಂ ಆಗಿ ಸದನದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1984ರ ಕಾಯ್ದೆ ಅನ್ವಯ ಲೋಕಾಯುಕ್ತ ರಚನೆ ಮಾಡಲಾಗಿದೆ. ಭ್ರಷ್ಟಾಚಾರ ತಡೆಗೆ ನಾವು ಎಸಿಬಿ ರಚನೆ ಮಾಡಿದೆವು. ಭ್ರಷ್ಟಾಚಾರ ತಡೆಗೆ ಬಿಜೆಪಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅರ್ಕಾವತಿ ಬಡಾವಣೆ ರೂಡೂ ಅರೋಪ ಮಾಡಿದ್ದಾರೆ. ನನ್ನ ಅವಧಿಯಲ್ಲಿ ಒಂದೇ ಒಂದು ಎಕರೆ ಕೂಡ ಅಕ್ರಮವಾಗಿಲ್ಲ. ಪಿ ಎಸ್ ಐ ಹಗರಣ, ಬಿಟ್ ಕಾಯಿನ್ ಹಗರಣಗಳನ್ನು ಮುಚ್ಚಿ ಹಾಕಲೆಂದು ಈಗ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನನ್ನ ಅವಧಿಯಲ್ಲಿ ಒಂದು ಎಕರೆ ಕೂಡ ಡಿನೋಟಿಫೈ ಆಗಿಲ್ಲ. ಆದರೆ ಸಿಎಂ ಬೊಮ್ಮಾಯಿ ನನ್ನ ವಿರುದ್ಧ 852 ಎಕರೆ ಡಿನೊಟಿಫೈ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿಗಳು ಜವಾಬ್ದಾರಿಯಿಂದ ಮಾತನಾಡಬೇಕಿತ್ತು. ಸದನಕ್ಕೆ ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ನಾವು ಧ್ವನಿ ಎತ್ತಿದ್ದಕ್ಕೆ ನಮ್ಮ ವಿರುದ್ಧ ಇಂತಹ ಸುಳ್ಳು ಆರೋಪ ಮಾಡುತ್ತಿದ್ದಾರೆ. ಪಿಎಸ್ ಐ ಹಗರಣ, ಬಿಟ್ ಕಾಯಿನ್ ಹಗರಣ ಸೇರಿ ಹಲವು ಹಗರಣಗಳನ್ನು ಮುಚ್ಚಿ ಹಾಕಲೆಂದು ಈಗ ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ತಾನು ಚೌಕಿದಾರ್ ಎನ್ನುತಾರೆ ಹಾಗಾದರೆ ಲೋಕಪಾಲ್ ಅನ್ನು ಯಾಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು. ನನ್ನ ಅವಧಿಯಲ್ಲಿ ಡಿನೊಫೈ ಆಗಿದೆ ಎಂಬುದು ಸುಳ್ಳು ಆರೋಪ, ಡಿನೋಟಿಫಿಕೇಷನ್ ನಡೆದದ್ದು ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಹೆಚ್.ಡಿ.ಕುಮಾರಸ್ವಾಮಿ ಕಾಲದಲ್ಲಿ ಎಂದು ತಿಳಿಸಿದ್ದಾರೆ.

*ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 11 ಜನರ ದುರ್ಮರಣ*

https://pragati.taskdun.com/chattisgharaccident11-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button