Latest

*ಮುಂಗಾರು ಪೂರ್ವ ಮಳೆಗೆ 52 ಜನರು ಸಾವು; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಏಪ್ರಿಲ್, ಮೇ ತಿಂಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತದೆ. ಈ ಬಾರಿ ವಾಡಿಕೆಗಿಂತ ಶೇ.10ರಷ್ಟು ಹೆಚ್ಚು ಮಳೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಿಸಿ, ಸಿಇಒಗಳ ಜೊತೆ ಸಭೆ ಬಳಿಕ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮುಂಗಾರು ಪೂರ್ವ ಮಳೆಗೆ 52 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದರು.

ಮಳೆಯಿಂದಾಗಿ 332 ಜಾನುವಾರುಗಳು ಸಾವನ್ನಪ್ಪಿವೆ. 814 ಮನೆಗಳಿಗೆ ಹಾನಿಯಾಗಿವೆ. ಮೃತ ಜಾನುವಾರುಗಳಿಗೆ ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಮಳೆಹಾನಿ ಬಗ್ಗೆ ಪರಿಶೀಲಿಸಿ ಪರಿಹಾರ ನೀಡುವಂತೆ ಹೇಳಲಾಗಿದೆ ಎಂದು ತಿಳಿಸಿದರು.

ಹವಾಮಾನ ಇಲಾಖೆ ವರದಿ ಪ್ರಕಾರ ಜೂನ್ 9ರಿಂದ ಮುಂಗಾರು ಮಳೆ ಆರಂಭವಾಗಲಿದೆ. ಮುಂಗಾರು ಬಿತ್ತನೆಗೆ ರೈತರು ಸಿದ್ಧರಾಗಿ. ಬಿತ್ತನೆಬೀಜ, ರಸಗೊಬ್ಬರ, ಕೀಟನಾಶಕ ಸಂಗ್ರಹಣೆಗೆ ಈಗಾಗಲೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Home add -Advt
https://pragati.taskdun.com/dcm-d-k-shivakumarpolice-officersworning/


Related Articles

Back to top button