
ಪ್ರಗತಿವಾಹಿನಿ ಸುದ್ದಿ: ರಾಯಚೂರಿನಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಯೋಜನೆ, ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ದಿಢೀರ್ ರದ್ದುಗೊಳಿಸಲಾಗಿದೆ.
ರಾಯಚೂರು ನಗರದ ವಾಲ್ ಕಾಟ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಕ್ರಮವನ್ನು ನಾಳೆ ಆಯೋಜಿಸಲಾಗಿತ್ತು. ಈ ವೇಳೆ ಪ್ರಜಾಸೌಧ ಕಟ್ಟಡದ ಅಡಿಗಲ್ಲು ಹಾಗೂ ಮುಂಗಾರು ಉತ್ಸವ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡುವವರಿದ್ದರು. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಬೆನ್ನಲ್ಲೇ ನಾಳಿನ ರಾಯಚೂರು ಕಾರ್ಯಕ್ರಮದ ಸಿದ್ಧತೆಗಳನ್ನು ರದ್ದುಗೊಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




