Latest

ಪಕ್ಷಕ್ಕೆ ಮೋಸಮಾಡಿ ಹೋದವರನ್ನು ವಾಪಸ್ ಸೇರಿಸಿಕೊಳ್ಳಲ್ಲ; ಸಿದ್ದರಾಮಯ್ಯ ಖಡಕ್ ಹೇಳಿಕೆ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಕಾಂಗ್ರೆಸ್ ಪಕ್ಷಕ್ಕೆ ದ್ರೋಹಮಾಡಿ ಬಿಜೆಪಿಗೆ ಸೇರ್ಪಡೆಯಾಗಿ ಸರ್ಕಾರ ರಚಿಸಲು ಕಾರಣರಾದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಗೆ ಮರಳುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಡಿರುವ ಹಿನ್ನೆಲೆಯಲ್ಲಿ ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ನಮ್ಮ ಪಕ್ಷಕ್ಕೆ ದ್ರೋಹಮಾಡಿ ಅಲ್ಲಿಗೆ ಹೋದವರನ್ನು ಯಾವುದೇ ಕಾರಣಕ್ಕೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ವ್ಯಾಪಾರಕ್ಕಾಗಿ ಪಕ್ಷ ಬಿಟ್ಟು ಹೋಗಿರುವವರ ಬಗ್ಗೆ ಉತ್ತರಕೊಡುವುದೂ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

Home add -Advt

ಇನ್ನು ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ಬಣ ರಾಜಕೀಯವಿಲ್ಲ. ಸಿದ್ದರಾಮಯ್ಯ ಬಣ, ಡಿಕೆಶಿ ಬಣ ಎಂಬುದು ಇಲ್ಲ. ನಮ್ಮಲ್ಲಿರುವುದು ಒಂದೇ ಬಣ ಅದು ಅಖಿಲ ಭಾರತ ಕಾಂಗ್ರೆಸ್ ಬಣ. ಇನ್ನು ಡಿ.ಕೆ.ಶಿವಕುಮಾರ್ ನನಗೆ ತಿಳಿಸಿಯೇ ದೆಹಲಿಗೆ ಹೋಗಿದ್ದಾರೆ ಹೊರತು ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಜನಪ್ರತಿನಿಧಿಗಳ ಪೀಠಕ್ಕೆ ವರ್ಗಾವಣೆ
ಇದು ರಾಜಕೀಯ ಮಾಡುವ ಸಮಯವಲ್ಲ; ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದ ಬಿ.ಸಿ.ಪಾಟೀಲ್

Related Articles

Back to top button