Kannada NewsKarnataka NewsLatestPolitics

*ಶಾಲೆಗಳಲ್ಲಿ ಬೆದರಿಕೆ ಕರೆ: ತನಿಖೆಗೆ ಆದೇಶ; ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ*

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ, ಎಚ್ಚರಿಕೆವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರವಾಗಿ ತನಿಖೆಗೆ ಸೂಚಿಸಲಾಗಿದೆ. ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.

ಕೆಂಗಲ್ ಹನುಮಂತಯ್ಯ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು:
ಕೆಂಗಲ್ ಹನುಮಂತಯ್ಯ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲುವಾಸ ಅನುಭವಿಸಿದರು. ಕರ್ನಾಟಕ ಏಕೀಕರಣಕ್ಕೆ ಹೋರಾಡಿದರು. ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಕೆಂಗಲ್ ಹನುಮಂತಯ್ಯನವರು ಮುಖ್ಯ ಮಂತ್ರಿಗಳಾಗಿದ್ದಾಗ ವಿಧಾನಸೌಧವನ್ನು ಕಟ್ಟಿದರು. ಅವರೇ ಸ್ವತ ನಿಂತು ಉಸ್ತುವಾರಿ ವಹಿಸಿದ್ದರು. ಇಡೀ ದೇಶದಲ್ಲಿಯೇ ಸುಂದರವಾದ ವಿಧಾನಮಂಡಲದ ಕಟ್ಟಡ ಕಟ್ಟಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button