Karnataka NewsPolitics

*ಹೈಕೋರ್ಟ್ ನಲ್ಲಿ ವಿಚಾರಣೆ ಆರಂಭ: ನೋಡೋಣ ಏನಾಗುತ್ತೆ ಎಂದು….ಎಂದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ನಲ್ಲಿ ವಿಚರಣೆ ನಡೆಯುತ್ತಿದೆ ಎಂದಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಡಾ ಹಗರಣ ವಿಚಾರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಹೈಕೋರ್ಟ್ ನಲ್ಲಿ ಪ್ರಾಸಿಕ್ಯೂಷನ್ ಕುರುತು ವಿಚಾರಣೆ ನಡೆಯುತ್ತಿದೆ. ನೋಡೋಣ ಏನಾಗುತ್ತೆ ಎಂದು… ಎಂದಿದ್ದಾರೆ.

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಗ್ವಿ ವಾದ ಮಂಡನೆ ಮಾಡುತ್ತಿದ್ದಾರೆ.


Related Articles

Back to top button