ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಾಣಂತಿಯರ ಸಾವು ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಬಳ್ಳಾರಿಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಸಾವು ಕಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದರು. ಪ್ರಕರಣದ ಬಗ್ಗೆ ಈಗಾಗಲೇ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಡ್ರಗ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಬಾಣಂತಿಯರ ಸಾವಿನ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ