Belagavi NewsBelgaum NewsKannada NewsKarnataka News

*ಇಂದು 6 ಜಿಲ್ಲೆಯಲ್ಲಿ ಹೆಚ್ಚು ಮಳೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 6 ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿಸಲಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ ಮುಂದುವರಿಯಲಿದೆ.

ಇಂದು ಪ್ರಮುಖವಾಗಿ ಬೆಳಗಾವಿ, ಉತ್ತರ ಕನ್ನಡ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 3 ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆ ವ್ಯಾಪಿಸಲಿದೆ ಎಂದು ಅಂದಾಜಿಸಲಾಗಿದೆ.

ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಕೋಲಾರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಗದಗ, ಹಾವೇರಿ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾಣ ಇಲಾಖೆ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button