Kannada NewsKarnataka NewsLatestPolitics

*ಬಿಜೆಪಿ ನಾಯಕರ ‘ಮೋಜು-ಮಸ್ತಿ’ ಹೇಳಿಕೆಗೆ ಖಡಕ್ ತಿರಿಗೇಟು ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಪ್ರಯಾಣದ ಬಗ್ಗೆ ಕಿಡಿ ಕಾರಿದ್ದ ಬಿಜೆಪಿ ನಾಯಕರು ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಸಿಎಂ ಹಾಗೂ ಸಚಿವರು ಜೆಟ್ ವಿಮಾನದಲ್ಲಿ ಪ್ರಯಾಣಿಸಿ ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಬಿಜೆಪಿ ನಾಯಕರ ಟೀಕೆಗೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು ನೀಡಿದ್ದಾರೆ.

ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ ಎಂದು ಬಿಜೆಪಿ ನಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ.

ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಕೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button