Belagavi NewsBelgaum NewsKannada NewsKarnataka NewsLatest

*ರಾತ್ರಿಯಿಡಿ ಬೆಳಗಾವಿಯಲ್ಲಿ ಬಿಜೆಪಿ ಧ್ವಜ ಕಟ್ಟಿದ ಶಾಸಕ ಅಭಯ್ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಇಂದಿನಿಂದ ಎರಡು ದಿನಗಳ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ಬೀಡು ಬಿಡಲಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.

ತಾಲೂಕಿನ ಕಾಕತಿ ಹೋಟೆಲ್ ನಲ್ಲಿ ಇಂದು ರಾತ್ರಿ 9 ಗಂಟೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಲೋಕಸಭಾ ಕ್ಷೇತ್ರಗಳ ಕೋರ್ ಕಮಿಟಿ ಸಭೆ ನಡೆಯಲಿದೆ.

ಮಾ.5ರಂದು ಚಿಕ್ಕೋಡಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಬೂತ್ ಮಟ್ಟದ ಸಭೆ ನಡೆಯಲಿದೆ. ಸಂಜೆ 4:30ಕ್ಕೆ ಬೆಳಗಾವಿಯಲ್ಲಿ ಪ್ರಬುದ್ಧರ ಸಭೆ ನಡೆಯಲಿದೆ. ವೈದ್ಯರು, ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಅಭಯ್ ಪಾಟೀಲ್, ಪಕ್ಷದ ಕಾರ್ಯಕರ್ತರ ಜೊತೆಗೂಡಿ ರಾತ್ರಿಯಿಡಿ ನಗರದ ವಿವಿಧೆಡೆ ಪಕ್ಷದ ಬಾವುಟ ಕಟ್ಟುವ ಕೆಲಸದಲ್ಲಿ ನಿರತರಾಗಿದ್ದರು. ಬೆಳಗಾವಿಯಾದ್ಯಂತ ಬಿಜೆಪಿ ಬಾವುಟ ರಾರಾಜಿಸುತ್ತಿದೆ.

Home add -Advt


Related Articles

Back to top button