Kannada NewsKarnataka NewsLatestPolitics

*ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವೇನು?*

ಪ್ರಗತಿವಾಹಿನಿ ಸುದ್ದಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪಕ್ಷಕ್ಕೆ ಬಲ

ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button