*ಡಿಡಿಸಿ ಬ್ಯಾಂಕ್ ಚುನಾವಣೆಯ ಪ್ರಕ್ರಿಯೆ ಒಂದೇ ದಿನದಲ್ಲಿ ಮುಕ್ತಾಯ: ಶ್ರವಣ ನಾಯಕ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸಿಸಿ ಬ್ಯಾಂಕಿನ ಚುನಾವಣೆ ಹಿನ್ನೆಲೆಯಲ್ಲಿ ಇದೇ ಭಾನುವಾರ (ಅ.19) ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಬೆಳಗಾವಿ ನಗರದ ಬಿ.ಕೆ. ಮಾಡೆಲ್ ಹೈಸ್ಕೂಲ್‌ನಲ್ಲಿ ಮತದಾನ ಡೆಯಲಿದ್ದು, ಅಂದು ಮತದಾನದ ಕೇಂದ್ರ ಸುತ್ತಲು 100 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ಚುನಾವಣಾಧಿಕಾರಿ ಶ್ರವಣ ನಾಯಕ್ ಹೇಳಿದರು.
ಶುಕ್ರವಾರ ಡಿಸಿಸಿ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಮಾಧ್ಯಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೆ 9 ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆಯಲಿದೆ
ಒಂದೇ ದಿನದಲ್ಲಿ ಚುನಾವಣಾ ಪ್ರಕ್ರಿಯೆ
ಒಟ್ಟು 676 ಮತದಾರರು ನೋಂದಣಿ ಮಾಡಿಕೊಂಡಿದ್ದು, ‘ಒಂದೇ ದಿನದಲ್ಲಿ ಇಡೀ ಚುನಾವಣಾ ಪ್ರಕ್ರಿಯೆ ಮುಗಿಯಲಿದೆ. ಮತದಾನ ಮುಗಿದ ಬಳಿಕ, ಮತ ಎಣಿಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಕೂಡ ಪ್ರಕಟಿಸಲಾಗುವುದು’
ಹಾಲಿ, ಮಾಜಿ ಸಚಿವರು, ಶಾಸಕರಿಗೆ ಮತದಾನ ಕೇಂದ್ರಕ್ಕೆ ಪ್ರವೇಶ ಇಲ್ಲ
ಮತದಾರರು ಅಲ್ಲದಿರುವ ಹಾಲಿ, ಮಾಜಿ ಸಚಿವರು, ಶಾಸಕರಿಗೆ ಮತದಾನ ಕೇಂದ್ರಕ್ಕೆ ಪ್ರವೇಶ ಇಲ್ಲ. ‘ಮತಗಟ್ಟೆಯಲ್ಲಿ ಮೊಬೈಲ್, ಪೆನ್ನು, ಪೆನ್ಸಿಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ಬಳಕೆ ನಿಷೇಧಿಸಲಾಗಿದೆ.
33 ಚುನಾವಣಾ ಸಿಬ್ಬಂದಿ, ಏಜೆಂಟರು ಹಾಗೂ ಅಧಿಕೃತ ಪಾಸ್ ಪಡೆದ ಮಾಧ್ಯಮದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾನ ಹಾಗೂ ಮತ ಎಣಿಕೆ ಪ್ರಕ್ರಿಯೆಗೆ ಎಲ್ಲ ಅಭ್ಯರ್ಥಿಗಳಿಗೂ ತಲಾ ಒಬ್ಬರೇ ಏಜೆಂಟರು ಇರಬೇಕು. ಅಭ್ಯರ್ಥಿಗಳು, ಚುನಾವಣೆ ಅಧಿಕಾರಿಗಳು ಹಾಗೂ ಮಾಧ್ಯಮದವರು ಸೇರಿದಂತೆ ಒಳಗಿರುವ ಎಲ್ಲರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದರು.
‘ಮತದಾರರು ಗೌಪ್ಯತೆಯಿಂದ ಮತದಾನ ಮಾಡಬೇಕು. ಗೌಪ್ಯತೆ ಉಲ್ಲಂಘನೆಯಾಗುವ ಯಾವುದೇ ಕಾರ್ಯ ಚಟುವಟಿಕೆಗಳಲ್ಲಿ ತೊಡಗುವಂತಿಲ್ಲ. ಎಲ್ಲ ಮತದಾರರೂ ಇದಕ್ಕೆ ಸಹಕರಿಸಬೇಕು’ ಎಂದೂ ಕೋರಿದರು.
‘ಈಗಾಗಲೇ ಮತದಾನ ನಡೆಯು ಬಿ.ಕೆ.ಮಾಡಲ್ ಪ್ರೌಢ ಶಾಲೆಯ ಸುತ್ತಮುತ್ತ 100 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅಭ್ಯರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಗೆಲುವು ಸಾಧಿಸಿದ ಅಭ್ಯರ್ಥಿ ಹಾಗೂ ಐವರು ಬೆಂಬಲಿಗರು ಸಮೇತ ಬಂದು ಪ್ರಮಾಣ ಪತ್ರ ತೆಗೆದುಕೊಂಡು ಹೋಗಬಹುದುಎಂದು ಹೇಳಿದರು.
ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ ವೇದಿಕೆಯ ಸಿಬ್ಬಂದಿ, ಅಂಬುಲೆನ್ಸ್, ಅಗ್ನಿಶಾಮಕ ದಳದ ವ್ಯವಸ್ಥೆಯು ಇರಲಿದೆ. ಮತದಾನದ ಕೇಂದ್ರ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು’ ಎಂದು ಅವರು ಹೇಳಿದರು.