Politics

*ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚು ಕೊಯ್ದು ದೌಷ್ಕರ್ಮಿಗಳು ವಿಕೃತಿ ಮೆರೆದಿದ್ದು, ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಸುಗಳ ಕೆಚ್ಚಲು ಕೊಯ್ದಿದ್ದು ತಪ್ಪು. ಯಾರೇ ಈ ಕೃತ್ಯ ಮಾಡಿದರೂ ಅದು ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ತಿಳಿಸಿದರು.

ಯಾರು ಈ ರೀತಿ ಮಾಡಿದ್ದಾರೆ ಎಂದು ಗೊತ್ತಿಲ್ಲ. ಆರೋಪಿಗಳನ್ನು ಪತ್ತೆಹಚ್ಚಲಾಗುತ್ತಿದೆ. ಕಮಿಷ್ನರ್ ಅವರ ಗಮನಕ್ಕೆ ತಂದಿದ್ದೇನೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಹೇಳಿದರು.

,
ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತ

ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ದನಗಳಿಗೆ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ತಿಳಿಸಿದರು.

ಜಾತಿಗಣತಿ ವರದಿ ಜಾರಿ- ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button