*ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚು ಕೊಯ್ದು ದೌಷ್ಕರ್ಮಿಗಳು ವಿಕೃತಿ ಮೆರೆದಿದ್ದು, ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಸುಗಳ ಕೆಚ್ಚಲು ಕೊಯ್ದಿದ್ದು ತಪ್ಪು. ಯಾರೇ ಈ ಕೃತ್ಯ ಮಾಡಿದರೂ ಅದು ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ತಿಳಿಸಿದರು. ಯಾರು ಈ ರೀತಿ ಮಾಡಿದ್ದಾರೆ ಎಂದು ಗೊತ್ತಿಲ್ಲ. ಆರೋಪಿಗಳನ್ನು ಪತ್ತೆಹಚ್ಚಲಾಗುತ್ತಿದೆ. ಕಮಿಷ್ನರ್ ಅವರ ಗಮನಕ್ಕೆ ತಂದಿದ್ದೇನೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ … Continue reading *ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಸಿಎಂ ಸಿದ್ದರಾಮಯ್ಯ*