Belagavi NewsBelgaum NewsLatestPolitics

*ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಇನ್ನೂ ಕೆಲವರ ಸಸ್ಪೆಂಡ್: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣ ಸಂಬಂಧ ಈಗಾಗಲೇ ಜೈಲಿನ 7 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

Home add -Advt

ಗೃಹ ಸಚಿವರಿಗೆ ಜೈಲಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚಿಸಿದ್ದೇನೆ. ಯಾರು ಈ ರೀತಿ ಜೈಲಿನಲ್ಲಿ ಸೌಲಭ್ಯಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ ಎಂದರು.

ಇನ್ನು ದರ್ಶನ್ ಹಾಗೂ ಗ್ಯಾಂಗ್ ನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಡಬೇಕಾ ಬೇಡವೇ ಎಂಬ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಿದರು.

Related Articles

Back to top button