Karnataka NewsLatestPolitics

*ಶಾಸಕರ ವಿದೇಶ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ಸಿದ್ಧತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ 25 ಶಾಸಕರು ಅಧ್ಯಯನಕ್ಕಾಗಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಬಣದ ಶಾಸಕರು ಮಾತ್ರ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ ಎಂಬ ಚರ್ಚೆ ಕೂಡ ರಾಜಕೀಯ ವಲಯದಲ್ಲಿ ಆರಂಭವಾಗಿದೆ.

Home add -Advt

ಶಾಸಕರ ವಿದೇಶ ಪ್ರವಾಸದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕರು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಯಾರೆಲ್ಲ ಹೋಗುತ್ತಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.


Related Articles

Back to top button