Politics

*ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? , ಏನು ಮಾಡಿಲ್ಲ ಎಂದರೆ ಏನು? .ಗ್ಯಾರಂಟಿಗಳನ್ನು ಒಳಗೊಂಡಂತೆ 1.ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಿದೆ ಎಂದರು.

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ತಿಳಿದೂ ಇಲ್ಲ

Home add -Advt

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ . ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಮುಖ್ಯಂತ್ರಿಗಳು ಪ್ರಶ್ನಿಸಿದರು.

ನಿನ್ನೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button