Latest

*ತೆರಿಗೆ ಪಾವತಿದಾರರಿಗೆ, GST ನೊಂದಣಿಯಾದವರಿಗೆ ಇಲ್ಲ ಗೃಹಲಕ್ಷ್ಮೀ ಭಾಗ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಜ್ಯೋತಿ ಹಾಗೂ ಗೃಹ ಲಕ್ಷ್ಮೀ ಎರಡೂ ಯೋಜನೆಯನ್ನು ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರಿಗೂ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಶಕ್ತಿಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆ ತೆರಿಗೆ ಪಾವತಿದಾರರಿಗೆ ಅನ್ವಯವಾಗುವುದಿಲ್ಲ. ಅಲ್ಲದೇ ಜಿಎಸ್ ಟಿ ನೊಂದಣಿದಾರರಿಗೆ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Home add -Advt

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯವಾಗಲಿದೆ. ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

https://pragati.taskdun.com/girlrapefriendsbangalore/

Related Articles

Back to top button