
ಪ್ರಗತಿವಾಹಿನಿ ಸುದ್ದಿ: ಶಾಲಾ-ಕಾಲೇಜುಗಳ ಸಮವಸ್ತ್ರ ವಿಚಾರವಾಗಿ ರಾಜ್ಯ ಸರ್ಕಾರ 2022ರ ಆದೇಶವನ್ನು ಹಿಂಪಡೆದು ಹೊಸ ಆದೇಶ ಹೊರಡಿಸಿದ್ದು, ಇದರಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಕೇವಲ ಹಿಜಾಬ್ ಗೆ ಮಾತ್ರ ವಕಾಶ ನೀಡಿಲ್ಲ, ಜನಿವಾರ, ರುದ್ರಾಕ್ಷಿ, ಶಿವದಾರ, ಉಡದಾರ, ಪೇಟ ಎಲ್ಲದಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಹೊಸ ರೂಪದ ಪೇಟಗಳಿಗೆ ಅವಕಾಶವಿಲ್ಲ ಎಂದರು.
ಇದೇ ವೇಳೆ ಕೇಸರಿ ಶಾಲಿಗೆ ಅವಕಾಶವಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಕೇಸರಿ ಶಾಲಿಗೆ ಅವಕಾಶವಿಲ್ಲ. ಶಾಲು ಹಾಕಿಕೊಂಡು ಶಾಲಾ-ಕಾಲೇಜಿಗೆ ಬರುವಂತಿಲ್ಲ ಎಂದು ಸ್ಪಷ್ಟ ಪಡಿಸಿದರು.



