*ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಠಿಣ ಕನೂನು ಕ್ರಮ; ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರೋರಾತ್ರಿ ಕಿಡಿಗೇಡಿಗಳು ಹೊಳೆಹೊನ್ನೂರು ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಧ್ವಂಸ ಮಾಡಿದ್ದಾರೆ. ಇದೀಗ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಹೊಳೆಹೊನ್ನೂರಿನಲ್ಲಿ ಗಂಧಿ ಪ್ರತಿಮೆ ಧ್ವಂಸಗೊಳಿಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳುವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಮಾಡಲು ಸಾಧ್ಯ. ಈ ಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಘಟನೆ ಬಗ್ಗೆ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ